ಕುಶಾಲನಗರ: ಪುರಸಭೆಯ ನೂತನ ಕಚೇರಿ ಸಂಕೀರ್ಣ ಉದ್ಘಾಟನೆ ಕೊಡಗಿನ ಅಭಿವೃದ್ದಿಗೆ ಸರ್ವ ರೀತಿಯ ಸಹಕಾರ:ಸಚಿವ ರಹೀಂ ಖಾನ್

ಕುಶಾಲನಗರ: ಪುರಸಭೆಯ ನೂತನ ಕಚೇರಿ ಸಂಕೀರ್ಣ ಉದ್ಘಾಟನೆ  ಕೊಡಗಿನ ಅಭಿವೃದ್ದಿಗೆ ಸರ್ವ ರೀತಿಯ ಸಹಕಾರ:ಸಚಿವ ರಹೀಂ ಖಾನ್

ಕುಶಾಲನಗರ: ಹೃದಯ ಭಾಗದಲ್ಲಿ ರೂ 7 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪುರಸಭೆ ನೂತನ ಸಂಕೀರ್ಣವನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಬುಧವಾರ ಲೋಕಾರ್ಪಣೆ ಗೊಳಿಸಿದರು.

ಕೊಡಗಿನ ಅಭಿವೃದ್ದಿಗೆ ಸರ್ವ ರೀತಿಯ ಸಹಕಾರ ನೀಡುವುದಾಗಿ ಸಚಿವರ ಭರವಸೆ ನೀಡಿದರು.ಕ್ಷೇತ್ರದ ಅಭಿವೃದ್ದಿ ಕುರಿತು ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಚಿವ ರಹೀಂ ಖಾನ್ ಮೆಚ್ಚುಗೆ ವ್ಯಕ್ತಪಡಿಸಿ, ಎಲ್ಲರೊಂದಿಗೆ ಬೆರೆಯುವ ಸರಳ ಸಜ್ಜನಿಕೆಯ ಶಾಸಕ ಡಾ.ಮಂತರ್ ಗೌಡ ಎಂದು ಸಚಿವ ರಹೀಂ ಖಾನ್ ಹೇಳಿದರು‌.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷೆ ಪುಟ್ಟ ಲಕ್ಷ್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಕುಡಾ ಅಧ್ಯಕ್ಷ ಪ್ರಮೋದ್ ಗಣಪತಿ, ಮುಖಂಡರಾದ ಕೆ.ಪಿ.ಚಂದ್ರಕಲಾ, ಮಂಜುನಾಥ್ ಗುಂಡೂರಾವ್, ನಾಗೇಂದ್ರ ಬಾಬು, ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು, ಸಂಘಸಂಸ್ಥೆಗಳ ಮುಖಂಡರು, ಉದ್ಯಮಿಗಳು, ಸಾರ್ವಜನಿಕರು ಹಾಜರಿದ್ದರು.