ಕುಶಾಲನಗರ : ಹೊಲಿಗೆ ಯಂತ್ರ ವಿತರಣೆ

ಕುಶಾಲನಗರ: ಶೇ.೨೫ ರ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪಂಚಾಯಿತಿ ಸಭಾಂಗಣದಲ್ಲಿ ಹೊಲಿಗೆ ಯಂತ್ರ ವಿತರಿಸಿದರು.
ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಮಟ್ಟವನ್ನು ಸುಧಾರಿಸುವ ದೃಷ್ಟಿಯಿಂದ ಶೇ.೨೫ ನಿಧಿಯಲ್ಲಿ ಹೊಲಿಗೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳು, ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಸಹಾಯ ಧನ, ಅಂತ್ಯಸಂಸ್ಕಾರದ ಹಣ ನೀಡಲಾಗುವುದು. ಸಂಬಂಧಿಸಿದವರು ಪಂಚಾಯಿತಿಗೆ ಅರ್ಜಿ ನೀಡಿ ಇದರ ಉಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾತನಾಡಿ, ಶೇ.೨೫ ರ ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ. ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಸರ್ಕಾರ ನೀಡುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭ ಲೆಕ್ಕ ಸಹಾಯಕಿ ಮಮತ, ಬಿಲ್ ಕಲೆಕ್ಟರ್ ಅವಿನಾಶ್, ಸಿಬ್ಬಂದಿಗಳಾದ ಪವಿತ್ರ, ಲೈನಾ ಇದ್ದರು.