ಕುಶಾಲನಗರ:ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಎಸ್ ಎಲ್ ಎನ್ ಸಂಸ್ಥೆಯಿಂದ ವಿಶೇಷ ಪೂಜೆ

ವರದಿ: ಕೆ.ಆರ್ ಗಣೇಶ್ ಕೂಡಿಗೆ
ಕೂಡಿಗೆ:ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಭಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಪೂಜಾ ಕಾರ್ಯಕ್ರಮವು ಜರುಗಿತು. ಕಳೆದ ಹಲವು ವರ್ಷಗಳಿಂದ ಕಾವೇರಿ ದೇಗುಲದಲ್ಲಿ ಭಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ 145ನೇ ಹುಣ್ಣಿಮೆ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಕಾವೇರಿ ಪ್ರತಿಮೆಗೆ ಹಾಲು, ತುಪ್ಪ, ಅರಿಸಿನ, ಕುಂಕುಮಗಳಿಂದ ಅಭಿಷೇಕ ಮಾಡಲಾಯಿತು.ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. 145 ನೇ ಪೂಜಾ ಕಾರ್ಯಕ್ರಮವನ್ನು, ಎಸ್ಎಲ್ಎನ್ ಸಂಸ್ಥೆಯ ಮುಖ್ಯಸ್ಥರಾದ ಶಾಂತಪ್ಪನ್ ಹಾಗೂ ವಿಶ್ವನಾಥನ್ ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿ
ಮಾತನಾಡಿದ ಎಸ್ ಎಲ್ ಎನ್ ಸಂಸ್ಥೆಯ ಶಾಂತಪ್ಪನ್ ಕಾವೇರಿ ನದಿ ನೀರಿನ ಶುದ್ಧತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಎಲ್ಲರೂ ತಮ್ಮ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡಿಕೊಂಡು ತ್ಯಾಜ್ಯ ನೀರು ನದಿಗೆ ಸೇರದಂತೆ ನೋಡಿಕೊಂಡರೆ ಅದು ನಾವು ಮಾಡುವ ಪುಣ್ಯದ ಕಾರ್ಯದಲ್ಲಿ ಒಂದಾಗುತ್ತದೆ. ಪ್ರತಿಯೊಬ್ಬರೂ ನದಿಯ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಭಾರವಿ ಕನ್ನಡ ಸಂಘದ ಪ್ರಮುಖರಾದ ರವೀಂದ್ರ ಪ್ರಸಾದ್ ಮಾತನಾಡಿ, ರಾಜ್ಯದಲ್ಲಿ ಕಾವೇರಿ ನದಿ ನೀರನ್ನು ಸಹಸ್ರಾರು ಮಂದಿ ಕುಡಿಯುತ್ತಿದ್ದು ಜನರು ಕಸ ತ್ಯಾಜ್ಯ ಎಸೆಯುವುದರಿಂದ ನೀರು ಮಲಿನವಾಗುತ್ತಿದೆ. ಸ್ವಚ್ಛ ಪರಿಸರ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು’ ಎಂದು ಮನವಿ ಮಾಡಿದರು.ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬಿಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ಸೋಮಶೇಖರ್, ಚಂದ್ರು, ರುದ್ರ, ಬಸವೇಗೌಡ, ಸೇರಿದಂತೆ ಮತ್ತಿತರರು ಹಾಜರಿದ್ದರು..