ಕುಶಾಲನಗರ:ಕೊಪ್ಪ ಗಡಿಭಾಗದ ಕಾವೇರಿ ನದಿ ನೀರಿನ ಸ್ಥಿತಿಗತಿ ಪರಿಶೀಲನೆ ನಡೆಸಿದ ಡಾ ಮಂತರ್ ಗೌಡ
ಕುಶಾಲನಗರ(Coorgdaily): ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಈ ಹಿನ್ನೆಲೆ ಕುಶಾಲನಗರ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.ಕಳೆದ ಕೆಲವು ವರ್ಷಗಳಿಂದ ಕುಶಾಲನಗರ ನದಿ ಪಾತ್ರದ ಬಡಾವಣೆಗಳಲ್ಲಿ ಪ್ರವಾಹ ಭೀತಿ ಆವರಿಸುವ ಹಿನ್ನೆಲೆಯಲ್ಲಿ ಶಾಸಕ ಡಾ.ಮಂತರ್ ಗೌಡ ರವರು ಇಂದು ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ನದಿ ನೀರು ಸ್ಥಿತಿ-ಗತಿ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
