ಕುಶಾಲನಗರ:ಮೈದಾನ ಅಭಿವೃದ್ಧಿ ಸಮಿತಿ ಹಾಗೂ ಪುರಸಭೆ ವತಿಯಿಂದ ಪರಿಸರ ದಿನಾಚರಣೆ

ಕುಶಾಲನಗರ:ಮೈದಾನ ಅಭಿವೃದ್ಧಿ ಸಮಿತಿ ಹಾಗೂ ಪುರಸಭೆ ವತಿಯಿಂದ ಪರಿಸರ ದಿನಾಚರಣೆ

ಕುಶಾಲನಗರ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕುಶಾಲನಗರದ ಗುಂಡೂರಾವ್ ಬಡಾವಣೆಯಲ್ಲಿ ಮೈದಾನ ಅಭಿವೃದ್ಧಿ ಸಮಿತಿ ಹಾಗೂ ಪುರಸಭೆಯ ಸಹಯೋಗದಲ್ಲಿ ಮೈದಾನದ ಸುತ್ತ ಸುಮಾರು 100 ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯಕ್ರಮಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ಚಾಲನೆ ನೀಡಿದರು.ಇದೇ ಸಂದರ್ಭ ಪುರಸಭೆ ಆರೋಗ್ಯ ನಿರೀಕ್ಷಕ ಉದಯಕುಮಾರ್ ಪ್ರತಿಜ್ಞಾ ವಿಧಿ ಬೋದಿಸಿದರು.

ಈ ವೇಳೆ ಮೈದಾನ ಅಭಿವೃದ್ಧಿ ಸಮಿತಿ ಪ್ರಮುಖರಾದ ಆದಂ.ಎಸ್ ಮಾತನಾಡಿ, ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯ. ಇದು ಒಂದು ದಿನಕ್ಕೆ ಸೀಮಿತವಾಗದೆ. ಪರಿಸರ ಕಾಳಜಿ ನಿರಂತರವಾಗಿರಬೇಕು. ಪ್ರತಿಯೊಬ್ಬರು ಗಿಡ ನೆಟ್ಟು ಪೋಷಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭ ಮೈದಾನ ಅಭಿವೃದ್ಧಿ ಸಮಿತಿಯ ಪ್ರಮುಖರಾದ ಲಕ್ಷ್ಮಿ ನಾರಾಯಣ್, ಸಚಿನ್ ಬಿದ್ದಪ್ಪ, ಶಶಿ, ಮೋಹನ್, ಅರುಣ್,ಭರತ್, ಶಮಿ, ಮತ್ತಿತರರು ಇದ್ದರು.