ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಉಪಚುನಾವಣೆ:  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಮಡಿಕೇರಿ:ವಿಧಾನಸಭಾ ಕ್ಷೇತ್ರದ ಕೆ. ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಣಂಗೇರಿ ವಾರ್ಡ್ ಉಪ ಚುನಾವಣೆಯಲ್ಲಿ, ಸಾಮಾನ್ಯ ಮಹಿಳಾ ಕ್ಷೇತ್ರದಲ್ಲಿ ಕಾಂಗ್ರೆ ಸ್ ಪಕ್ಷದ ಅಭ್ಯರ್ಥಿ ನೇತ್ರ ಗೆಲುವು ಸಾಧಿಸಿದ್ದರು. ಕ್ಷೇತ್ರದ ಶಾಸಕರಾದ ಮಂತರ್ ಗೌಡರ, ಜಿಲ್ಲಾ ಕಾಂಗ್ರೆಸ್, ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎ ಹಂಸ ಹಾಗೂ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಜಾನ್ಸನ್ ಪಿಂಟೋ ರವರ ಮಾರ್ಗದರ್ಶನದಲ್ಲಿ ಚುನಾವಣೆಗೆ ತಯಾರಿ ನಡೆಸಲಾಗಿತ್ತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಈ ಹಿನ್ನಲೆಯಲ್ಲಿ ನೇತ್ರ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.