ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

ಗೋಣಿಕೊಪ್ಪ: ಪೊನ್ನಂಪೇಟೆ ಭಾಗದ ಪ್ರವಾಸದಲ್ಲಿದ್ದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಇಂದು ಕೆ ಬಾಡಗ ಪಂಚಾಯಿತಿಗೆ ಭೇಟಿ ನೀಡಿದರು.
ಶಾಸಕರನ್ನು ಬರಮಾಡಿಕೊಂಡ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಮತ್ತು ಗ್ರಾಮಸ್ಥರು ತಮ್ಮ ಹಲವು ಅಭಿವೃದ್ಧಿ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ವಿಶೇಷವಾಗಿ ಕೆ ಬಾಡಗ ಗ್ರಾಮ ಪಂಚಾಯಿತಿ ಈಗ ಕಾರ್ಯನಿರ್ವಹಿಸುತ್ತಿರುವ ಕಟ್ಟಡದ ಬದಲಾಗಿ, ಸೂಕ್ತ ನಿವೇಶನ ಗುರುತಿಸಿ ಅಥವಾ ಪರ್ಯಾಯ ಕಟ್ಟಡದ ವ್ಯವಸ್ಥೆ ಮಾಡಿಕೊಡಬೇಕೆಂದು ತಮ್ಮ ಪ್ರಮುಖ ಬೇಡಿಕೆಯನ್ನು ಮಾನ್ಯ ಶಾಸಕರಲ್ಲಿ ಕೇಳಿಕೊಂಡರು. ಮನವಿಯನ್ನು ಸ್ವೀಕರಿಸಿದ ಮಾನ್ಯ ಶಾಸಕರು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಸೂಚಿಸುವುದು ಆಗಿ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಕೂಡ ತಮ್ಮ ಮನವಿಯನ್ನು ಮಾನ್ಯ ಶಾಸಕರಲ್ಲಿ ಹೇಳಿಕೊಟ್ಟರು.ಹಲವು ಬೇಡಿಕೆಗಳನ್ನು ಸ್ವೀಕರಿಸಿದ ಮಾನ್ಯ ಶಾಸಕರು ಎಲ್ಲವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ಕೆ ಬಾಡಗ ವಲಯ ಅಧ್ಯಕ್ಷರಾದ ಚಿಮಣ್ಣಮಾಡ ರವಿ, ಪಂಚಾಯಿತಿ ಅಧ್ಯಕ್ಷರು,ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.