ಕೊಡಗಿನಲ್ಲಿ ವರುಣನ ಅಬ್ಬರ: ಮುಂಜಾಗೃತಾ ಕ್ರಮಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಡಾ.ಮಂತರ್ ಗೌಡ

ಕೊಡಗಿನಲ್ಲಿ ವರುಣನ ಅಬ್ಬರ:  ಮುಂಜಾಗೃತಾ ಕ್ರಮಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ: ಕಾರ್ಯನಿಮಿತ ಬೆಂಗಳೂರಿನಲ್ಲಿದ್ದ ಶಾಸಕರಾದ ಡಾ ಮಂತರ್ ಗೌಡ ಅವರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಕಾರಣ ತುರ್ತಾಗಿ ಬೆಂಗಳೂರಿನಿಂದ ನೇರವಾಗಿ ಹಾರಂಗಿಗೆ ಬಂದು ಹಾರಂಗಿ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಮಳೆಯಿಂದ ಉಂಟಾಗುವ ತೊಂದರೆಗಳಿಗೆ ಪರಿಹಾರಗಳನ್ನು ಮುಂಜಾಗೃತೆ ಕ್ರಮವಾಗಿ ನಿರ್ವಹಿಸಲು ಸೂಚಿಸಲಾಯಿತು.ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ, ಹಾರಂಗಿ ಜಲಾಶಯ ಇಲಾಖೆಯ ಅಧಿಕಾರಿಗಳು ಉಪಸ್ಥಿತಿ ಇದ್ದರು.