ಕೊಡಗು ಚಾಂಪಿಯನ್ಸ್ ಲೀಗ್ ಫುಟ್ಬಾಲ್ ಪಂದ್ಯಾವಳಿ:ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರದ ವತಿಯಿಂದ ಅಗತ್ಯ ಕ್ರಮ: ಶಾಸಕ ಎ.ಎಸ್ ಪೊನ್ನಣ್ಣ
ಕೊಡಗು ಚಾಂಪಿಯನ್ಸ್ ಲೀಗ್ ಫುಟ್ಬಾಲ್ ಪಂದ್ಯಾವಳಿ:ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರದ ವತಿಯಿಂದ ಅಗತ್ಯ ಕ್ರಮ: ಶಾಸಕ ಎ.ಎಸ್ ಪೊನ್ನಣ್ಣ
ಗೋಣಿಕೊಪ್ಪ: ಇಲ್ಲಿನ ಚೆಲ್ಸಿ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ ಹೊನಲು ಬೆಳಕಿನ ಕೊಡಗು ಚಾಂಪಿಯನ್ಸ್ ಲೀಗ್ ಫುಟ್ಬಾಲ್ ಪಂದ್ಯಾಟದಲ್ಲಿ, ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭಾಗವಹಿಸಿ ಶುಭ ಕೋರಿದರು.
ಗೋಣಿಕೊಪ್ಪಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಪಂದ್ಯಾಟದ ಎರಡನೇ ಸೆಮಿಫೈನಲ್ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಫುಟ್ಬಾಲ್ ಕ್ರೀಡೆಯು ಇತ್ತೀಚಿನ ದಿನಗಳಲ್ಲಿ ಕೊಡಗಿನಾದ್ಯಂತ ಅತ್ಯಂತ ಜನಪ್ರಿಯಗೊಳ್ಳುತ್ತಿದ್ದು, ಈ ಭಾಗದಲ್ಲಿ ಅತಿ ಹೆಚ್ಚಿನ ಯುವಕರು ಫುಟ್ಬಾಲ್ ಕ್ರೀಡೆಯತ್ತ ಆಕರ್ಷಿತರಾಗುತ್ತಿದ್ದಾರೆ. ಅಂತರರಾಷ್ಟ್ರೀಯ ಖ್ಯಾತಿಯ ಹಲವಾರು ಆಟಗಾರರನ್ನು ಮಾದರಿಯಾಗಿ ಮಾಡಿಕೊಂಡಿರುವ ನಮ್ಮ ಯುವಕರು, ಈ ಕ್ರೀಡೆಯಲ್ಲಿ ಮತ್ತಷ್ಟು ಯಶಸ್ಸು ಕಾಣುವುದರೊಂದಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪಂದ್ಯಾಟಗಳಲ್ಲಿ ಭಾಗವಹಿಸುವಂತಾಗಲಿ ಎಂದು ಶುಭ ಕೋರಿದರು.
ಕ್ರೀಡೆಯು ಸ್ವಾಸ್ಥ್ಯ ಸಮಾಜಕ್ಕೆ ಒಂದು ಪ್ರಮುಖ ಅವಶ್ಯಕತೆಯಾಗಿದ್ದು ಯುವಜನತೆ ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸದಾ ಹುಮ್ಮಸ್ಸಿನಲ್ಲಿರುವಂತೆ ಕರೆ ನೀಡಿದರು. ತಾವು ಸಹ ಕ್ರೀಡಾ ಪ್ರೇಮಿಯಾಗಿದ್ದು ಈ ಭಾಗದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲು ಶ್ರಮಿಸುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಆಹ್ವಾನಿತ ಅತಿಥಿಗಳು,ಕಾರ್ಯಕ್ರಮ ಆಯೋಜಕರು ಹಾಗೂ ಕ್ರೀಡಾ ಪ್ರೇಮಿಗಳು ಉಪಸ್ಥಿತರಿದ್ದರು.