ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಭೆ: ಪದಾಧಿಕಾರಿಗಳ ನೇಮಕಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಮೈಸಿ ಕತ್ತಣಿರ ಹಾಗೂ ವಿರಾಜಪೇಟೆ ಕ್ಷೇತ್ರಕ್ಕೆ ರಾಹುಲ್ ಮಾರ್ಷಲ್ ನೇಮಕ

ಮಡಿಕೇರಿ:ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯು,ರಾಜ್ಯ ಯುವ ಕಾಂಗ್ರೆಸ್ ಉಪಾದ್ಯಕ್ಷ ಮಂಜು ಚೆಟ್ಟಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಷೇಕ್ ರಿಜ್ವಾನ್ ರವರ ನೇತೃತ್ವದಲ್ಲಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಅಧ್ಯಕ್ಷತೆಯಲ್ಲಿ ಮಡಿಕೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಪಕ್ಷ ಸಂಘಟನೆ ನೂತನ ಪದಾಧಿಕಾರಿಗಳ ನೇಮಕ ಹಾಗೂ ಪದಗ್ರಹಣ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.ಪದಾಧಿಕಾರಿಗಳ ನೇಮಕ ಪ್ರಕಿಯೆಗೆ ಕೊಡಗು ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮೈಸಿ ಕತ್ತಣಿರ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಮತ್ತು ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಹುಲ್ ಮಾರ್ಷಲ್ ರವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ನೇಮಕ ಮಾಡಲಾಯಿತು.
ಈ ಸಂದರ್ಭ ಕೆಪಿ ಸಿ ಸಿ ವಕ್ತಾರ ಆನಂದ ಕುಮಾರ್ ಬೆಂಗಳೂರು, ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ರಾಹುಲ್ ಮಾರ್ಷಲ್,ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಮ್, ಮಡಿಕೇರಿ ಯುವ ಕಾಂಗ್ರೆಸ್ ವಿಧಾನಸಭಾಧ್ಯಕ್ಷ ಅನೂಪ್ ಕುಮಾರ್,ವಿರಾಜಪೇಟೆ ಯುವ ಕಾಂಗ್ರೆಸ್ ವಿಧಾನಸಭಾಧ್ಯಕ್ಷ ರಕ್ಷಿತ್ ಚಂಗಪ್ಪ,ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್,ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ,ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ದ್ಯಾನ್ ದೇವಯ್ಯ, ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್, ಉಪಾಧ್ಯಕ್ಷ ಶಕೀಲ್,ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರ್ಜುನ್ ಇದ್ದರು.