ಕೊಡಗು ಜಿಲ್ಲೆಯ ಮಳೆ ವಿವರ: ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆ

ಕೊಡಗು ಜಿಲ್ಲೆಯ ಮಳೆ ವಿವರ:  ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆ

ಮಡಿಕೇರಿ -ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.36 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 444.06 ಮಿ.ಮೀ ಮಳೆಯಾಗಿತ್ತು.                    ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.33 ಮಿ.ಮೀ. ಕಳೆದ ವರ್ಷ ಇದೇ ದಿನ 29.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1171.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 636.41 ಮಿ.ಮೀ. ಮಳೆಯಾಗಿತ್ತು.   

 ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 15.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 819.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 385.60 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 724.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 409.42 ಮಿ.ಮೀ. ಮಳೆಯಾಗಿತ್ತು.

 ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 19.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 679.42 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 362.98 ಮಿ.ಮೀ. ಮಳೆಯಾಗಿತ್ತು. 

 ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 546.64 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 425.90 ಮಿ.ಮೀ. ಮಳೆಯಾಗಿತ್ತು. 

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 4, ಸಂಪಾಜೆ 30.50, ಭಾಗಮಂಡಲ 10.80, ಶಾಂತಳ್ಳಿ 1.10 ಮಿ.ಮೀ.ಮಳೆಯಾಗಿದೆ.  

  

ಹಾರಂಗಿ ಜಲಾಶಯದ ನೀರಿನ ಮಟ್ಟ (11-06-2025) ವರದಿ

 ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.48 ಅಡಿಗಳು. ಕಳೆದ ವರ್ಷ ಇದೇ ದಿನ 2825.76 ಅಡಿಗಳು. ಇಂದಿನ ನೀರಿನ ಒಳಹರಿವು 1200 ಕ್ಯುಸೆಕ್, ಕಳೆದ ವರ್ಷ ಇದೇ ದಿನ 520 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 2000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.