ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ: ವಿದ್ಯುತ್ ತಂತಿಗೆ ಅಡ್ಡಲಾಗಿ ಬಿದ್ದ ಮರ ತೆರವು: ಕಡಂಗ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ: ವಿದ್ಯುತ್ ತಂತಿಗೆ ಅಡ್ಡಲಾಗಿ ಬಿದ್ದ ಮರ ತೆರವು: ಕಡಂಗ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ

ಕಡಂಗ:ಕಾಕೋಟೋಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಮರೂರುವಿನಲ್ಲಿ ಕಳೆದ ಎರಡು ದಿನಗಳಿಂದ ಬಿಡುವಿಲ್ಲದೆ ಸುರಿದ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ತಂತಿಗೆ ಅಡ್ಡಲಾಗಿ ಮರವು ಬಿದ್ದಿದ್ದು ಸ್ಥಳೀಯರ ಪರಿಶ್ರಮದಿಂದ ಜೆಸಿಬಿ ಮುಖಾಂತರ ಮರವನ್ನು ತೆರವುಗೊಳಿಸಲಾಯಿತು.ಕಡಂಗ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.ಈ ಸಂದರ್ಭ ಸ್ಥಳೀಯರಾದ ಶಫೀಕ್ ಬಿಕೆ, ಮುಸ್ತಫ ಮಹಮದ್ ಕುಂಜಿ, ಜಲೀಲ್ ಸಂತೋಷ್ ಕಾರ್ಯಾಚರಣೆಯಲ್ಲಿ ಕೈಜೋಡಿಸಿದರು.ಹಾಗೂ ನರಿಂಯದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಪಟ್ಟು, ಕಡಂಗ,ಪೂದವಾಡ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ತೊಂದರೆಗಿಡಾಗಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ವಿದ್ಯುತ್ ಸಂಪರ್ಕವನ್ನು ಒದಗಿಸಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವರದಿ:ನೌಫಲ್ ಕಡಂಗ