ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ: ಮೇ 28ರವರೆಗೆ ರೆಡ್ ಅಲರ್ಟ್ ಘೋಷಣೆ
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರಿನ ಆರ್ಭಟ ಮುಂದುವರಿದಿದ್ದು,ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮಳೆರಾಯನು ಅಬ್ಬರಿಸುತ್ತಿದ್ದಾರೆ.ಮುಂಗಾರು ಕಾಲಿಡುವ ಮುನ್ನವೇ ಜಿಲ್ಲೆಯ ಜನತೆಗೆ ಮಳೆಗಾಲದ ಅನುಭವುಂಟಾಗಿದೆ.ಭಾರತೀಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಯಲ್ಲಿ ಮೇ 28ರ ಬೆಳಗ್ಗೆ 8.30 ಗಂಟೆಯವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಇನ್ನೂ ನಾಲ್ಕು ದಿನಗಳ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.