ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ:ಕುಶಾಲನಗರ-ಸಿದ್ದಾಪುರ ಮುಖ್ಯ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಸಿದ್ದಾಪುರ-ಕುಶಾಲನಗರ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ವಾಲ್ನೂರಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು,ವಿದ್ಯುತ್ ಕಂಬಕ್ಕೆ ಹಾನಿಯುಂಟಾಗಿದೆ.