ಕೊಡಗು: ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಕೊಡಗು: ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಡಿಕೇರಿ:-ವಿರಾಜಪೇಟೆ 66/33 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ 33/11 ಕೆವಿ ವಿದ್ಯುತ್ ಉಪಕೇಂದ್ರ ಮೂರ್ನಾಡುವಿನಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು, ಮರಗೋಡು ಫೀಡರ್‍ಗಳ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

       ಹಾಗೆಯೇ ವಿರಾಜಪೇಟೆ 66/33 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

     ಆದ್ದರಿಂದ ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಬೇಟೋಳಿ, ಆರ್ಜಿ, ಕೆದಮುಳ್ಳೂರು, ಕಾಕೋಟುಪರಂಬು, ಸಿದ್ದಾಪುರ, ಮಾಲ್ದಾರೆ, ಗುಹ್ಯ, ಕರಡಿಗೋಡು, ಅಮ್ಮತ್ತಿ, ಚೆಂಬೆಬೆಳ್ಳೂರು, ಕಣ್ಣಂಗಾಲ, ಹಾಲುಗುಂದ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.