ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ನೂತನ ಎರಡು ಬಸ್ಸ್: ಬಸ್ಸ್ ಚಲಾಯಿಸಿ ಉದ್ಘಾಟನೆ ಮಾಡಿದ ಡಾ ಮಂತರ್ ಗೌಡ
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ಹೊಸ ವಾಹನಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಚಾಲನೆ ನೀಡಿದರು. ಒಂದು ವಾಹನಕ್ಕೆ 27 ಲಕ್ಷ ರೂ. ನಂತೆ ಒಟ್ಟು 54 ಲಕ್ಷ ರೂ ವೆಚ್ಚದ ಸಿಎಸ್‍ಆರ್ ನಿಧಿಯಿಂದ ತರಿಸಲಾಗಿರುವ ಎರಡು ಹೊಸ ವಾಹನಕ್ಕೆ ಚಾಲನೆ ನೀಲಾಗಿದೆ.
ಈ ಸಂದರ್ಭ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ನಗರಸಭೆ ಸದಸ್ಯರಾದ ಮುಸ್ತಪಾ ಎಂ.ಎ., ಅರುಣ್ ಶೆಟ್ಟಿ, ಮನ್ಸೂರ್ ಅಲಿ, ಬಿ.ಸಿ.ಜಗದೀಶ್, ಜುಲೈಕಾಬಿ, ಮುದ್ದುರಾಜು ಬಿ.ಎನ್., ಪೌರಾಯುಕ್ತರಾದ ಎಚ್.ಆರ್.ರಮೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಸತೀಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ವೈದ್ಯಾಧಿಕಾರಿಗಳಾದ ಡಾ.ಪುರುಷೋತ್ತಮ, ಡಾ.ಶ್ವೇತಾ ಇತರರು ಇದ್ದರು.