ಖಿಳರಿಯಾ ಜುಮಾ ಮಸೀದಿ ಉದ್ಘಾಟನೆ: ಎ.ಎಸ್ ಪೊನ್ನಣ್ಣ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ

ಖಿಳರಿಯಾ ಜುಮಾ ಮಸೀದಿ ಉದ್ಘಾಟನೆ: ಎ.ಎಸ್ ಪೊನ್ನಣ್ಣ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ

ವಿರಾಜಪೇಟೆ ಸಮೀಪದ ಪೆರುಂಬಾಡಿಯಲ್ಲಿರುವ ಖಿಳರಿಯಾ ಜುಮಾ ಮಸೀದಿಯ ಉದ್ಘಾಟನೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಮುಖ್ಯ ಅತಿಥಿಯಾಗಿದ್ದು, ಈ ತಿಂಗಳಾಂತ್ಯದಲ್ಲಿ ಈ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಇಂದುಶಾಸಕರು, ಪೆರುಂಬಾಡಿಗೆ ಕಾರ್ಯನಿಮಿತ್ತ ತೆರಳಿದ್ದ ಸಂದರ್ಭ ಮಸೀದಿಗೆ ಭೇಟಿ ನೀಡಿ ಅಲ್ಲಿಯ ಸ್ಥಳೀಯರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣ್ಣಚ್ಚ,ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಶಬೀರ್,ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.