ಗುಜರಾತ್ ವಿಮಾನ ಪತನ:ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ! ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು!
ಹೊಸದಿಲ್ಲಿ: ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ಗೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.ಇದರಲ್ಲಿ ನಾಲ್ವರು ಪದವಿ ಮತ್ತು ಐವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿ ಸೇರಿದಂತೆ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ ಕನಿಷ್ಠ 133 ಪ್ರಯಾಣಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.