ಗುತ್ತಿಗೆದಾರ ಸಂಪತ್ ಕೊಲೆ ಪ್ರಕರಣ:20ಲಕ್ಷ ರೂ ಕೊಡ್ತೀನಿ ಬಾ ಎಂದಳು!... ಪತಿಯೊಂದಿಗೆ ಸೇರಿ ತನ್ನ ಮಾಜಿ ಪ್ರಿಯಕರನನ್ನೇ ಹತ್ಯೆಗೈದಳು!!!

May 18, 2025 - 19:53
 0  1.3k
ಗುತ್ತಿಗೆದಾರ ಸಂಪತ್ ಕೊಲೆ ಪ್ರಕರಣ:20ಲಕ್ಷ ರೂ ಕೊಡ್ತೀನಿ ಬಾ ಎಂದಳು!...  ಪತಿಯೊಂದಿಗೆ ಸೇರಿ ತನ್ನ ಮಾಜಿ ಪ್ರಿಯಕರನನ್ನೇ ಹತ್ಯೆಗೈದಳು!!!

ಮಡಿಕೇರಿ:ಸೋಮವಾರಪೇಟೆ ಕಕ್ಕೆಹೊಳೆ ಜಂಕ್ಷನ್ ನಿವಾಸಿ ಗುತ್ತಿಗೆದಾರ ಸಂಪತ್ (ಶಂಭು) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ.ತನ್ನೊಂದಿಗೆ ಜೀವನ ನಡೆಸಿದ್ದ ಹೆಣ್ಣೇ..... ಸಂಪತ್ ಜೀವಕ್ಕೆ ಆಪತ್ತು ತಂದಿರುವುದು ಮತ್ತೊಂದು ಕುತೂಹಲಕಾರಿ ಸಂಗತಿಯಾಗಿದೆ.

ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲುಗೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂದಿತ ಆರೋಪಿಗಳಾಗಿದ್ದಾರೆ.

ಪ್ರಕರಣದ ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ👇🏻:

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿ ಆರೋಪಿ ಸಂಗೀತಳು ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ 9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡಿದ್ದಳು. ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೋವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಸಂಪತ್ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕೆ ಆಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.ಮೇ 16 ರಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ‌ ಮೇರೆಗೆ ಕಿರಣ ನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು 17ರಂದು ಮಂಗಳೂರಿನ ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ. ತಾ 18ರಂದು ಕಿರಣ್ , ಹೆಂಡತಿ ಸಂಗೀತಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆದಾಗ ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದರು. ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ತಮ್ಮ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು. ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು, ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು. ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು. ಈ ಹಿಂದೆ ಸಂಗೀತ ಕೆಲವು ತಿಂಗಳುಗಳ ಕಾಲ ಸಂಪತ್ ನೊಂದಿಗೆ ಜೀವನ ನಡೆಸಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಜೀವನ ನಡೆಸುತ್ತಿದ್ದಾಳೆ. ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ. ಗುತ್ತಿಗೆದಾರನಾದ ಸಂಪತ್ ನಾಯರ್ ಶ್ರೀಮಂತನಾಗಿದ್ದನು.ಹೆಣ್ಣಿನೊಂದಿಗಿನ ಸಂಬಂಧದಿಂದ ಇದೀಗ ಜೀವವನ್ನೇ ‌ಕಳೆದುಕೊಂಡಿದ್ದಾನೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 1
Sad Sad 1
Wow Wow 1