ಗೋಣಿಕೊಪ್ಪ: 2ಕೋಟಿ ವೆಚ್ಚದ ತಡೆಗೋಡೆ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಚಾಲನೆ

ಗೋಣಿಕೊಪ್ಪ: 2ಕೋಟಿ ವೆಚ್ಚದ  ತಡೆಗೋಡೆ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಚಾಲನೆ

ಗೋಣಿಕೊಪ್ಪ:ವಿ

ರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಇಂದು ಗೋಣಿಕೊಪ್ಪಲುವಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಗೋಣಿಕೊಪ್ಪಲುವಿನಲ್ಲಿರುವ ಅಮ್ಮ ಕೊಡವ ಸಮಾಜದ ಸಭಾಂಗಣಕ್ಕೆ, ₹ 2 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 

ಬಳಿಕ ಸಮಾಜದ ಪ್ರಮುಖರೊಂದಿಗೆ ಮಾತನಾಡಿದ ಮಾನ್ಯ ಶಾಸಕರು, ಸಮಾಜದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 20 ಲಕ್ಷಗಳ ಹೆಚ್ಚುವರಿ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಈ ಹಿಂದೆ ಅಮ್ಮ ಕೊಡವ ಸಮಾಜದ ಪ್ರಮುಖರು ಮಾನ್ಯ ಶಾಸಕರನ್ನು ಭೇಟಿಯಾಗಿ ತಮ್ಮ ಸಮಾಜದ ಸಭಾಂಗಣಕ್ಕೆ ತಡೆಗೋಡೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಇವರ ಮನವಿಗೆ ಸ್ಪಂದಿಸಿದ್ದ ಶಾಸಕರು ಶೀಘ್ರದಲ್ಲೇ ತಡೆಗೋಡೆಗೆ ಅನುದಾನ ಒದಗಿಸುವುದಾಗಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.    

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಗೋಣಿಕೊಪ್ಪಲು ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಮೋದ್ ಗಣಪತಿ, ಅಮ್ಮ ಕೊಡವ ಸಮಾಜದ ಅಧ್ಯಕ್ಷರಾದ ಬಾನಂಡ ಪೃತ್ಯು, ನಾಳಿಯಮಾಂಡ ಉಮೇಶ್, ಪಂಚಾಯಿತಿ ಉಪಾಧ್ಯಕ್ಷರಾದ ಮಂಜುಳ, ಪಕ್ಷದ ಪ್ರಮುಖರು ಅಮ್ಮ ಕೊಡವ ಸಮಾಜದ ಪ್ರಮುಖರು, ಇಲಾಖೆಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.