ಗೋಣಿಕೊಪ್ಪ: ಕೀರೆಹೊಳೆ ನೀರಿನ ಮಟ್ಟದಲ್ಲಿ ಹೆಚ್ಚಳ

ಗೋಣಿಕೊಪ್ಪ: ಕೀರೆಹೊಳೆ ನೀರಿನ ಮಟ್ಟದಲ್ಲಿ ಹೆಚ್ಚಳ

ಗೋಣಿಕೊಪ್ಪಲು: ಗಾಳಿ-ಮಳೆ ವಾಣಿಜ್ಯ ನಗರಿ ಗೋಣಿಕೊಪ್ಪಲಿನಲ್ಲಿ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಗರದ ಪಟೇಲ್ ಬಡಾವಣೆಯಲ್ಲಿ ಮಳೆನೀರು ರಸ್ತೆ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಮಸೀದಿ ರಸ್ತೆಯಲ್ಲೂ ಸಹ ಮಳೆ ನೀರು ರಸ್ತೆಯಲ್ಲಿ ಹರಿದ ಪರಿಣಾಮ ಸಾರ್ವಜನಿಕರು ಹಾಗೂ ವಾಹನ ಚಾಲಕರು ಪರದಾಡುವಂತಾಯಿತು.

ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪಟ್ಟಣದ ಎರಡನೇ ಬ್ಲಾಕ್‌ನಲ್ಲಿ ಕೀರೆಹೊಳೆ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದ್ದು, ಕೀರೆಹೊಳೆ ನೀರು ಸಾರ್ವಜನಿಕ ಶೌಚಾಲಯಕ್ಕೆ ಹಾಗೂ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿತು. ಮಳೆಯಿಂದಾಗಿ ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯರಸ್ತೆಯಲ್ಲಿ ತೋಡಿನ ತಡೆಗೋಡೆ ಕುಸಿತಗೊಂಡಿದೆ.

ವರದಿ: ಚಂಪಾ ಗಗನ, ಪೊನ್ನಂಪೇಟೆ