ಗೋಣಿಕೊಪ್ಪ: ಬೈಪಾಸ್ ರಸ್ತೆ ಹಾಗೂ ಆರೆಂಜ್ ಸೊಸೈಟಿ ರಸ್ತೆಯ ಲೋಕಾರ್ಪಣೆ ಮಾಡಿದ ಎಎಸ್ ಪೊನ್ನಣ್ಣ

ಗೋಣಿಕೊಪ್ಪ: ಬೈಪಾಸ್ ರಸ್ತೆ ಹಾಗೂ ಆರೆಂಜ್ ಸೊಸೈಟಿ ರಸ್ತೆಯ ಲೋಕಾರ್ಪಣೆ ಮಾಡಿದ ಎಎಸ್ ಪೊನ್ನಣ್ಣ

ಗೋಣಿಕೊಪ್ಪ: ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ನೂತನವಾಗಿ ಅಭಿವೃದ್ಧಿಗೊಂಡ ಗೋಣಿಕೊಪ್ಪಲು ಬೈಪಾಸ್ ರಸ್ತೆ ಹಾಗೂ ಆರೆಂಜ್ ಸೊಸೈಟಿ ರಸ್ತೆಯ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಮ ಶಾಸಕರು, ಈ ಹಿಂದೆ ಈ ಭಾಗದ ರಸ್ತೆಗಳು ತೀವ್ರ ಹದಗೆಟ್ಟಿದ್ದ ಬಗ್ಗೆ ಸಾರ್ವಜನಿಕರಿಂದ ನನಗೆ ಹಲವು ಮನವಿಗಳು ಬಂದಿತ್ತು. ಸ್ಥಳೀಯ ಪ್ರಮುಖ ರೊಂದಿಗೆ ಚರ್ಚಿಸಿ ಅಗತ್ಯಕ್ಕನುಸಾರ ಕ್ಷೇತ್ರಾದ್ಯಂತ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇನೆ. ಇಂದು ಈ ಎರಡು ರಸ್ತೆಗಳನ್ನು ಲೋಕಾರ್ಪಣೆ ಮಾಡಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಕ್ಷೇತ್ರದಾದ್ಯಂತ ಉತ್ತಮ ರಸ್ತೆಗಳ ಒದಗುವಂತಾಗಲು ಶ್ರಮಿಸುವುದಾಗಿ ಇದೇ ಸಂದರ್ಭದಲ್ಲಿ ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯತಿ ಉಪಾಧ್ಯಕ್ಷೆ ಮಂಜುಳ,ಕಾಂಗ್ರೆಸ್ ಮುಖಂಡರು, ಸ್ಥಳೀಯರು ಉಪಸ್ಥಿತರಿದ್ದರು.