ಗೋಣಿಕೊಪ್ಪ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ 11 ಮಂದಿಯ ಬಂಧನ

ಗೋಣಿಕೊಪ್ಪ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಗೋಣಿಕೊಪ್ಪ ಪೊಲೀಸರು ಶುಕ್ರವಾರ 11 ಯುವಕರನ್ನು ಬಂಧಿಸಿ ಆರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ನಿರತರಾಗಿದ್ದ ವೇಳೆ ಗಾಂಜಾ ಸೇವನೆ ಪ್ರಕರಣ ಬೆಳಕಿಗೆ ಬಂದಿದ್ದು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ವಿರಾಜಪೇಟೆ ತಾಲ್ಲೂಕು ಉಪಪೊಲೀಸ್ ಅಧೀಕ್ಷಕ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣಾ ಅಧಿಕಾರಿ ಪ್ರದೀಪ್ ಕುಮಾರ್, ನೇತೃತ್ವದ ತಂಡ ಗಾಜಾ ಸೇವನೆ ಮಾಡುತ್ತಿದ್ದವರ ಮೇಲೆ ಕ್ರಮ ಕೈಕೊಂಡಿದ್ದಾರೆ. ಹೆಚ್ಚುವರಿ ತನಿಖೆ ಮುಂದುವರಿದಿದೆ.