ಗ್ರೀನ್ ಸ್ಟಾರ್ ಮಟ್ಟಂ: ವಾಲಿಬಾಲ್ ಪಂದ್ಯಾವಳಿಗೆ ಚಾಲನೆ

ಸಿದ್ದಾಪುರ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದ ಮಟ್ಟ ಎಂಬಲ್ಲಿ, ಗ್ರೀನ್ ಸ್ಟಾರ್ ಯಿತ್ ಕ್ಲಬ್ ವತಿಯಿಂದ ಆಯೋಜನೆಗೊಂಡಿರುವ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಭಾಗವಹಿಸಿ ಮಾತನಾಡಿದರು.
ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಕೊಡಗಿನಾದ್ಯಂತ ಯುವಕರು ಕ್ರೀಡೆಗೆ ಹೆಚ್ಚು ಆಕರ್ಷಿತರಾಗಿದ್ದು, ಕ್ರೀಡೆಯಲ್ಲಿ ಅದ್ಭುತ ಸಾಧನೆಗಳನ್ನು ಕೂಡ ಮಾಡುತ್ತಿದ್ದಾರೆ. ಇಂತಹ ಪಂದ್ಯಾವಳಿಗಳು ಯುವ ಜನತೆಗೆ ಕ್ರೀಡೆಯಲ್ಲಿ ಮತ್ತಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಪಂದ್ಯಾವಳಿಯ ಆಯೋಜಕರನ್ನು ಅಭಿನಂದಿಸುತ್ತ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಮಾನ್ಯ ಶಾಸಕರು ಶುಭ ಕೋರಿದರು.ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರು,ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಗೂ ಕ್ರೀಡಾ ಪ್ರೇಮಿಗಳು ಉಪಸ್ಥಿತರಿದ್ದರು.