ಚೆಯ್ಯಂಡಾಣೆ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ: ಒಂದು ವಾರದಿಂದ ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು

ಚೆಯ್ಯಂಡಾಣೆ:ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ ಪಟ್ಟಣದ ಸುತ್ತಮುತ್ತ ನಿರಂತರ ವಿದ್ಯುತ್ ಸಮಸ್ಯೆಯಾಗುತ್ತಿದ್ದು ಸಂಬಂಧಪಟ್ಟ ಚೆಸ್ಕಾಂ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಈ ವ್ಯಾಪ್ತಿಯ ಚೇಲಾವರದಲ್ಲಿ ಕಾಡಾನೆ ಹಾವಳಿ ಕೂಡ ಹೆಚ್ಚಿದ್ದು ವಿದ್ಯುತ್ ಸಮಸ್ಯೆ ತಲೆದೂರಿದೆ. ಪ್ರಸಿದ್ಧ ಪ್ರವಾಸಿ ತಾಣ ಚೇಲಾವರ ಜಲಪಾತ, ಕಬ್ಬೆ ಬೆಟ್ಟ ಕೂಡ ಇದೆ. ಪ್ರವಾಸಿಗರಿಗೆ ಏನಾದರೂ ಸಮಸ್ಯೆ ಯಾದರೆ ಕರೆ ಮಾಡಲು ವಿದ್ಯುತ್ ಸಮಸ್ಯೆಯಿಂದ ನೆಟ್ವರ್ಕ್ ಇರಲ್ಲ,ಅವಘಡ ಸಂಭವಿಸಿದರು ಆಂಬುಲೆನ್ಸ್ ಗಳಿಗೆ ಕರೆ ಮಾಡಲು ನೆಟ್ವರ್ಕ್ ಸಿಗಲ್ಲ ಎಂಬುದು ಇಲ್ಲಿನ ಗ್ರಾಮಸ್ಥರ ನಿರಂತರ ಸಮಸ್ಯೆ ಯಾಗಿದೆ ಎಂದು ತಿಳಿಸಿದ್ದಾರೆ.