ಚೆರಿಯಪರಂಬು:ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಚೆರಿಯಪರಂಬು:ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದ ಚೆರಿಯಪರಂಬುವಿನಲ್ಲಿ ಕಳೆದ ಹಲವು ವರ್ಷಗಳಿಂದ ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿದ್ದ ರಸ್ತೆಯ ಅಭಿವೃದ್ಧಿ ಕಾಮಗಾರಿಯು ಪೂರ್ಣಗೊಂಡು ಗ್ರಾಮಸ್ಥರ ಸುಗಮ ಸಂಚಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದಂತಾಗಿದೆ.

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು.ಬೇತು ಗ್ರಾಮದ ಚೆರಿಯಪರಂಬುವಿನಿಂದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ರಸ್ತೆ ಗುಂಡಿ ಬಿದ್ದು ಹದಗೆಟ್ಟು ಗ್ರಾಮಸ್ಥರ ಸಂಚಾರಕ್ಕೆ ಅಯೋಗ್ಯವಾಗಿತ್ತು. ಈ ರಸ್ತೆ ಕಾಮಗಾರಿಯನ್ನು ನಡೆಸಿಕೊಡುವಂತೆ ಇಲ್ಲಿನ ನಿವಾಸಿಗಳು ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಶಾಸಕ ಪೊನ್ನಣ್ಣ ಅವರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕ ಪೊನ್ನಣ್ಣ 15ಲಕ್ಷ ರೂ ಅನುದಾನವನ್ನು ಬಿಡುಗಡೆಗೊಳಿಸಿದ್ದರು.ಈಗ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ಪೊನ್ನಣ್ಣ ಅವರ ನಿರ್ದೇಶನದಂತೆ ನಿರ್ಮಾಣಗೊಂಡ ನೂತನ ಕಾಂಕ್ರೀಟ್ ರಸ್ತೆಯನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಉದ್ಘಾಟಿಸಿದರು.

 ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಮಾತನಾಡಿ ಹಲವಾರು ವರ್ಷಗಳಿಂದ ಹದಗೆಟ್ಟು ಗ್ರಾಮಸ್ಥರ ಸಂಚಾರಕ್ಕೆ ಅಯೋಗ್ಯವಾಗಿದ್ದ ಈ ರಸ್ತೆಗೆ ಮಾನ್ಯ ಶಾಸಕರಾದ ಪೊನ್ನಣ್ಣನವರು ಅನುದಾನವನ್ನು ಬಿಡುಗಡೆ ಗೊಳಿಸಿ ನಿರ್ಮಿಸಲಾದ ಕಾಂಕ್ರೆಟ್ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿದ್ದೇವೆ. ಮಾನ್ಯ ಶಾಸಕರ ಸಹಕಾರದಿಂದ ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ನಡೆದಿದೆ. ಮುಂದೆಯೂ ಅವರ ಸಹಕಾರ ದಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಇದೇ ರೀತಿ ಮುಂದುವರೆಯಲಿ ಎಂದು ಗ್ರಾಮಸ್ಥಪರವಾಗಿ ಕೃತಜ್ಞತೆ ಸಲ್ಲಿಸಿದರು. 

 ಈ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕಂಗಾಂಡ ಶಶಿ ಮಂದಣ್ಣ, ಕೆಡಿಪಿ ಸದಸ್ಯ ಕಲಿಯಂಡ ಕೌಶಿ ಕುಶಾಲಪ್ಪ,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮಾಚೇಟಿರ ಕುಶು ಕುಶಾಲಪ್ಪ, ಗ್ರಾಮಸ್ಥರಾದ ಪರವಂಡ ಶಫೀಕ್, ಅಪ್ಪಸ್ವಾಮಿ, ಅಬ್ದುಲ್ಲಾ, ಬಾಳೆಯಡ ಪ್ರಿಯಾ,ಅಣ್ಣಯ್ಯ ಮತ್ತಿತರರು ಹಾಜರಿದ್ದರು.