ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ

May 26, 2025 - 18:05
 0  38
ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ

ಮಡಿಕೇರಿ:ವಿಪತ್ತು ನಿರ್ವಹಣಾ ಕಾಯ್ದೆ, 2005 ಕಲಂ 34(ಸಿ)ರಲ್ಲಿ ಉಲ್ಲೇಖಿಸಿರುವಂತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 152 ಮತ್ತು 163 ರಲ್ಲಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. 

ಈ ಆದೇಶದ ಉಲ್ಲಂಘನೆಯು ವಿಪತ್ತು ನಿರ್ವಹಣಾ ಕಾಯ್ದೆ, 2005 ಸೆಕ್ಷನ್ 51(ಬಿ) ಮತ್ತು ಸಂಬಂಧಿತ ನಿಯಮ, ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0