ಜೂ.23 ಸೋಮವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಕೊಡಗು ಜಿಲ್ಲಾ ಪ್ರವಾಸ

Jun 21, 2025 - 17:28
 0  52
ಜೂ.23 ಸೋಮವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ:-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜೂನ್, 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜೂನ್, 23 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲೆಯ ಡಿ.ಬಿ.ಕುಪ್ಪೆಯ ಬಳ್ಪೆಯಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಪೆಯಲ್ಲಿ ಅರ್ಜುನ ಆನೆಯ ಸ್ಮಾರಕ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಡಿ.ಬಿ.ಕುಪ್ಪೆಯ ಬಳ್ಪೆಯಲ್ಲಿ ಜಿಲ್ಲೆಯ ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0