ಜೂನ್ 05 ರಂದು ಯುವ ಕಾಂಗ್ರೆಸ್ ವತಿಯಿಂದ ಸುಂಟ್ಟಿಕೊಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಸುಂಟ್ಟಿಕೊಪ್ಪ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾ್ ಮಂಜುನಾಥ್ ರವರ ಆದೇಶ ಮೇರೆಗೆ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಯುವ ಕಾಂಗ್ರೆಸ್ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅನೂಪ್ ಕುಮಾರವರ ನೇತೃತ್ವದಲ್ಲಿ, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗಿಡ ಅಥವಾ ಸಸಿ ನೆಡುವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.ಪರಿಸರ ಪ್ರೇಮಿಗಳು ಯುವ ಕಾಂಗ್ರೆಸ್ ಮುಖಂಡರು, ಮಡಿಕೇರಿ ವಿಧಾನಸಭಾ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರುಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಬೇಕಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಸುಂಟ್ಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮತಿಯ ಉಪಾಧ್ಯಕ್ಷ, ಅನೂಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.