ಟಿ.ಶೆಟ್ಟಿಗೇರಿ:40ಕ್ಕೂ ಅಧಿಕ ಮಂದಿ ಎ.ಎಸ್ ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

May 10, 2025 - 16:27
 0  99
ಟಿ.ಶೆಟ್ಟಿಗೇರಿ:40ಕ್ಕೂ ಅಧಿಕ ಮಂದಿ ಎ.ಎಸ್ ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಪೊನ್ನಂಪೇಟೆ :ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮಕ್ಕೆ ಇಂದು ಭೇಟಿ ನೀಡಿದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು, ಇಲ್ಲಿ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರ ಕಾರ್ಯವೈಖರಿಯನ್ನು ಮೆಚ್ಚಿ ಸುಮಾರು 40ಕ್ಕೂ ಅಧಿಕ ಇತರ ಪಕ್ಷದ ಹಲವು ಕಾರ್ಯಕರ್ತರು ಇಂದು ಕಾಂಗ್ರೆಸ್ ಸೇರ್ಪಡೆಗೊಂಡರು.  

ಎಲ್ಲರನ್ನೂ ಶಾಲು ಹೊಂದಿಸಿ ಮೂಲಕ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಮಾನ್ಯ ಶಾಸಕರು, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವುದರೊಂದಿಗೆ ಎಲ್ಲರೂ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಕರೆ ನೀಡಿದರು. ಪಕ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡವರನ್ನು ಉದ್ದೇಶಿಸಿ, ಶತಮಾನಗಳಿಂದ ಜನಪರವಾಗಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಎಲ್ಲರೂ ಪಕ್ಷ ಸಂಕಟಣೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.     

ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ,ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಪ್ರಭು ಸುಬ್ಬಯ್ಯ,ಕಾಂಗ್ರೆಸ್ ಪಕ್ಷದ ಮುಖಂಡರು,ಕಾರ್ಯಕರ್ತರು, ಹಾಗೂ ಇತರ ಪ್ರಮುಖರು ಉಪಸಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0