ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕಿಂಗ್ ‌ಕೊಹ್ಲಿ!

May 12, 2025 - 12:06
 0  95
ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕಿಂಗ್ ‌ಕೊಹ್ಲಿ!

ದೆಹಲಿ:ಭಾರತದ ಸ್ಟಾರ್ ಕ್ರಿಕೆಟ್ ಆಟಗಾರ ‌ಮಾಜಿ ನಾಯಕ,ದಾಖಲೆಗಳ ಸರದಾರ ಕಿಂಗ್ ಕೊಯ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಪ್ರಯಾಣವು ನನ್ನನ್ನು ಇಷ್ಟು ದೊಡ್ಡ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಅದು ನನ್ನನ್ನು ಪರೀಕ್ಷಿಸಿತು, ನನ್ನನ್ನು ರೂಪಿಸಿತು ಮತ್ತು ನನಗೆ ಪಾಠಗಳನ್ನು ಕಲಿಸಿತು. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ಸಂತೋಷದಿಂದ ನೋಡುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚಿಗಷ್ಟೇ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಕೊಹ್ಲಿ ಕೂಡ ನಿವೃತ್ತಿಯಾಗುವ ಬಗ್ಗೆ ಸುದ್ದಿ ಹರಿದಾಡಿತ್ತು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0