ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಕಾಲೇಜು: ಪ್ರಥಮ ಪಿಯುಸಿ ತರಗತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಕಾಲೇಜು: ಪ್ರಥಮ ಪಿಯುಸಿ ತರಗತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಡಿಕೇರಿ:-ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಕಾಲೇಜು ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ, ಇಲ್ಲಿಗೆ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದವರಿಗೆ ಶೇ.75 ಹಾಗೂ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು ಸೇವಾ ಸಿಂಧು ಪೋರ್ಟಲ್‍ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಪ್ಲಿಕೇಶನ್ ಫಾರ್ ಪ್ರಥಮ ಪಿಯುಸಿ ಪ್ರವೇಶಕ್ಕೆ MMDRPU/MMDRS(Integrated) /GMRS(Integrated)/ Dr.APJRPU/MAMS(Upgraded) ಸೇವೆಯ ವೆಬ್ ತಾಣದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಈ ಮೂಲಕ ಕೋರಿದೆ.

  ಅರ್ಜಿ ಸಲ್ಲಿಸಲು ಮೇ, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ವಸತಿ ಶಾಲೆಯಲ್ಲಿ ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಾಗ್ರಿ, ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ಅನುಭವಿ ಹಾಗೂ ನುರಿತ ಉಪನ್ಯಾಸಕರಿಂದ ಬೋಧನೆ, ಸ್ಮಾರ್ಟ್ ಕ್ಲಾಸ್ ಸೌಲಭ್ಯ, ಗುಣಮಟ್ಟದ ಸುಸಜ್ಜಿತ ಪ್ರಯೋಗಾಲಯ ಕಂಪ್ಯೂಟರ್, ಗ್ರಂಥಾಲಯ, ಸಭಾಂಗಣ, ಆಟದ ಮೈದಾನ ಹಾಗೂ ಜಿಮ್ ವ್ಯವಸ್ಥೆ ಇರುತ್ತದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ಫಿಸಿಕ್ಸ್ ವಾಲ್ ವತಿಯಿಂದ ಉಚಿತ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ತರಬೇತಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಉಚಿತ ಸಿಎ ಫೌಂಡೇಷನ್. ಸಿಎಲ್‍ಎಟಿ ತರಬೇತಿ ಇರುತ್ತದೆ. 

 ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 7676473767, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.