ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ: ಬುಡಕಟ್ಟು ನಿವಾಸಿಗಳ ಅಭಿವೃದ್ಧಿಗಾಗಿ ಸರಕಾರ ವಿಶೇಷ ಯೋಜನೆಗಳನ್ನು ರೂಪಿಸುತ್ತಿದೆ:ಶಾಸಕ ಎಎಸ್ ಪೊನ್ನಣ್ಣ

ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ  ಪೂಜೆ:  ಬುಡಕಟ್ಟು ನಿವಾಸಿಗಳ ಅಭಿವೃದ್ಧಿಗಾಗಿ ಸರಕಾರ ವಿಶೇಷ ಯೋಜನೆಗಳನ್ನು ರೂಪಿಸುತ್ತಿದೆ:ಶಾಸಕ ಎಎಸ್ ಪೊನ್ನಣ್ಣ

ತಿತಿಮತಿ :ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಶಾಸಕರ ಅನುದಾನದಲ್ಲಿ ಐಟಿಡಿಪಿ ಇಲಾಖೆ ಮುಖಾಂತರ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ನೆರವೇರಿಸಿದರು.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಬುಡಕಟ್ಟು ನಿವಾಸಿಗಳ ಅಭಿವೃದ್ಧಿಗಾಗಿ ಸರಕಾರ ವಿಶೇಷ ಯೋಜನೆಗಳನ್ನು ರೂಪಿಸುತ್ತಿದ್ದು, ಈ ಭಾಗದ ಹಾಡಿಗಳಲ್ಲಿ ವಾಸಿಸುವ ಜನರ ಅನುಕೂಲಕ್ಕೆ ಎಂದು ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಂತೆ ಇಂದು ತಾನು ನಿಟ್ಟೂರು, ದೇವರಪುರ ಹಾಗೂ ತಿತಿಮತಿ ಭಾಗದ ಸುಮಾರು ಆರು ಹಾಡಿಗಳ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಈಗಾಗಲೇ ತಾನು ಸರಕಾರ ಮಟ್ಟದಲ್ಲಿ ಮಾತನಾಡಿದ್ದು, ಸರಕಾರ ಹಾಗೂ ಘನ ನ್ಯಾಯಾಲಯ ಬುಡಕಟ್ಟು ನಿವಾಸಿಗಳಿಗೆ ವಿದ್ಯುತ್ ಸರಬರಾಜು ಹಾಗೂ ನೀರಿಗೆ ಯಾವುದೇ ತೊಂದರೆ ಮಾಡಬಾರದೆಂದು ಸೂಚಿಸಿರುತ್ತದೆ. ಇದು ಜನರ ಗೆಲುವಾಗಿದ್ದು ಮುಂದಿನ ದಿನಗಳಲ್ಲಿ ನಿಮ್ಮಗಳ ಜೀವನ ಸುಖಮವಾಗಲು ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು ಭರವಸೆ ನೀಡಿದರು.    ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ತಿತಿಮತಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನವೀನ್, ದೇವರಪುರ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಬಸ್ವಂತ್ (ಮನು), ಸ್ಥಳೀಯ ಮುಖಂಡರು, ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.