ದೇವರಪುರ: 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಉದ್ಘಾಟಿಸಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ತಾಲೂಕಿನ ದೇವರಪುರ ಗ್ರಾಮದ, ದೇವರ ಕಾಡು ಪೈಸಾರಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರ ಅನುದಾನದಲ್ಲಿ ನಿರ್ಮಾಣಗೊಂಡ ₹ 11 ಲಕ್ಷ ವೆಚ್ಚದ ನೂತನ ರಸ್ತೆಯನ್ನು ಇಂದು ಲೋಕಾರ್ಪಣೆ ಮಾಡಲಾಯಿತು.
ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಈ ಭಾಗದ ಜನರ ಅಭಿವೃದ್ಧಿಗಾಗಿ ತಾನು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ವಿಶೇಷವಾಗಿ ಹಾಡಿಗಳಲ್ಲಿ ಹಾಗೂ ಕಾಡಂಚಿನಲ್ಲಿ ವಾಸಿಸುವ ಜನರಿಗೆ ಉತ್ತಮ ರಸ್ತೆ ಕಲ್ಪಿಸಿ ಕೊಡುವುದರೊಂದಿಗೆ, ಅವರ ಸುರಕ್ಷತೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ದೇವರಪುರ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಬಸಂತ್,ತಿತಿಮತಿ ವಲಯ ಅಧ್ಯಕ್ಷರಾದ ನವೀನ್,ಕಾಂಗ್ರೆಸ್ ಮುಖಂಡರಾದ ಬೆನ್ನಿ,ಎ ಜೆ ಬಾಬು,ಮಾಜಿ ಜಿಲ್ಲಾಪಂಚಾಯಿತಿ ಸದಸ್ಯರಾದ ಪಂಕಜ,ಡಿಸಿಸಿ ಸದಸ್ಯರಾದ ಮುಕಟ್ಟೀರ ಸಂದೀಪ್, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು,ಅಲೀರ ರಶೀದ್,ಚೆರಂಡ ಮೋಹನ್, ಮತ್ತು ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.