ನಾಪೋಕ್ಲು: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ.ಪಿ. ಜ್ಯೋತಿಗೆ ಬೀಳ್ಕೊಡುಗೆ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿಂರುವ ಎಂ.ಪಿ.ಜ್ಯೋತಿ ಯವರನ್ನು ಬಲ್ಲಮಾವಟಿ ಅಂಗನವಾಡಿ ವೃತ್ತದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಕಳೆದ 36ವರ್ಷಗಳ ಸುಧೀರ್ಘಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜ್ಯೋತಿರವರಿಗೆ ನಾಪೋಕ್ಲುವಿನ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ಸರಳ ಕಾರ್ಯಕ್ರಮದಲ್ಲಿ ಬಲ್ಲ ಮಾವಟಿ ಅಂಗನವಾಡಿ ವೃತ್ತದ ಸದಸ್ಯರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.ಇದೇ ಸಂದರ್ಭ ಉತ್ತಮ ಅಂಗನವಾಡಿ ಕಾರ್ಯಕರ್ತೆ ರಾಜ್ಯ ಪ್ರಶಸ್ತಿ ಪಡೆದ ಹಳೇತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿಯವರನ್ನು ಕೂಡ ಸನ್ಮಾನಿಸಲಾಯಿತು.
ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೀಲಾ ಅಶೋಕ್, ಬಲ್ಲಮಾವಟಿ ಹಾಗೂ ನಾಪೋಕ್ಲು ವೃತ್ತದ ವಿವಿಧ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು,ಸಹಾಯಕಿಯರು ಹಾಗೂ ಪುಟಾಣಿ ಮಕ್ಕಳು ಭಾಗವಹಿಸಿದ್ದರು.
ಅಂಗನವಾಡಿ ಕಾರ್ಯಕರ್ತೆ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ,ಭಾಗ್ಯವತಿ ಸರ್ವರನ್ನು ವಂದಿಸಿದರು.