ನಾಪೋಕ್ಲು-ಪಾರಾಣೆ-ಮೂರ್ನಾಡು ಬಲಮುರಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎ. ಎಸ್. ಪೊನ್ನಣ್ಣ

(ವರದಿ:ಝಕರಿಯ ನಾಪೋಕ್ಲು)
ನಾಪೋಕ್ಲು :ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಮೂರ್ನಾಡು,ಬಲಮುರಿ ಪಾರಾಣೆ ಸಂಪರ್ಕಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಸುಮಾರು 2.75 ಕೋಟಿ ರೂ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪಾರಣೆ ಬಳಿಯ ನಾಯಕಂಡ ಕುಟುಂಬಸ್ಥರ ಮನೆಯ ಬಳಿ ಭೂಮಿ ಪೂಜೆ ನೆರವೇರಿಸಿದ ಬಳಿಕ ಶಾಸಕ ಪೊನ್ನಣ್ಣ ಮಾತನಾಡಿ ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು ಇಂಜಿನಿಯರ್ ಹಾಗೂ ಗುತ್ತಿಗೆದಾರರು ಕಾಮಗಾರಿ ಮಾಡುವ ಸಂದರ್ಭದಲ್ಲಿ ಸ್ಥಳೀಯರು ಗುಣಮಟ್ಟ ಕಾಯ್ದುಕೊಳ್ಳುವಂತೆ ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ತಾನು ಈ ರಸ್ತೆಯ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿಶೇಷ ಅನುದಾನವನ್ನು ತಂದಿದ್ದು, ಇದರ ಸಂಪೂರ್ಣ ಸದುಪಯೋಗ ಈ ಭಾಗದ ಸಾರ್ವಜನಿಕರಿಗೆ ಹಾಗೂ ಈ ರಸ್ತೆಯನ್ನು ಬಳಸುವ ಎಲ್ಲಾ ಬಳಕೆದಾರರಿಗೆ ಲಭಿಸುವಂತಹಾಗಬೇಕು ಹಾಗೂ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಶೇಷ ಗಮನಹರಿಸಬೇಕೆಂದು ತಾಕೀತು ಮಾಡಿದರು. ಭೂಮಿ ಪೂಜೆಗೆ ತೆರಳುವ ಮಾರ್ಗದಲ್ಲಿ ಕೊರಗಜ್ಜನ ನೇಮೋತ್ಸವ ನಡೆಯುತ್ತಿರುವುದನ್ನು ಗಮನಿಸಿದ ಶಾಸಕರು ಕೊರಗಜ್ಜನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ,ಪಾರಾಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬೊಳ್ಳಂಡ ಶರಿನ್,ಸಿ ಆರ್ ಪಿ. ಉಮ್ಮರ್, ನಾಯಕಂಡ ಮುತ್ತಪ್ಪ,ಬ್ಲಾಕ್ ಅಧ್ಯಕ್ಷರು, ಕೆಡಿಪಿ ಸದಸ್ಯರು ಸೇರಿದಂತೆ ಕಾಂಗ್ರೆಸ್ ಮುಖಂಡರು,ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಹಾಜರಿದ್ದರು.