ನಾಪೋಕ್ಲು:ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಮನುಷ್ಯ ದೈಹಿಕವಾಗಿ ಸದೃಢವಾಗಬೇಕಾದರೆ ಯೋಗ ಬಹಳ ಮುಖ್ಯ: ಶಿಕ್ಷಕ ಲೋಕೇಶ್

ನಾಪೋಕ್ಲು:ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ :   ಮನುಷ್ಯ ದೈಹಿಕವಾಗಿ ಸದೃಢವಾಗಬೇಕಾದರೆ ಯೋಗ ಬಹಳ ಮುಖ್ಯ: ಶಿಕ್ಷಕ ಲೋಕೇಶ್

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು "ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ, ರಾಷ್ಟ್ರೀಯ ಸೇವಾ ಯೋಜನೆ,ರೋಟರಿ ಇಂಟ್ರಾಕ್ಟ್ ಕ್ಲಬ್ ಇವರ ಸಹಯೋಗದಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಶಿಕ್ಷಕ ಲೋಕೇಶ್ ಯೋಗದ ಮಹತ್ವದ ಕುರಿತು ಮಾತನಾಡಿ ಮನುಷ್ಯನು ದೈಹಿಕವಾಗಿ ಸದೃಢವಾಗಬೇಕಾದರೆ ಯೋಗವು ಬಹಳ ಮುಖ್ಯ.ಯೋಗವನ್ನು ಒಂದು ದಿನ ಮಾತ್ರ ಮಾಡಿದರೆ ಸಾಲದು ಪ್ರತಿದಿನ ಶಾಲೆ ಮತ್ತು ಮನೆಯಲ್ಲಿ ಮಾಡು ವಂತಾಗಬೇಕು. ಪ್ರತಿದಿನ ನೀವು ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಖಿನ್ನತೆ ಆಯಾಸ ದೂರ ಮಾಡಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ 10 ನಿಮಿಷವಾದರೂ ಯೋಗಾಭ್ಯಾಸವನ್ನು ಮಾಡಬೇಕು.ಪ್ರತಿಯೊಬ್ಬರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಲು ಯೋಗ ಅತ್ಯಂತ ಸಹಕಾರಿಯಾಗಿದೆ. ಇದರಿಂದ ನಮ್ಮ ದೇಹದ ಬಹುತೇಕ ರೋಗಗಳನ್ನು ತಡೆಗಟ್ಟಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲೆಯ ಕನ್ನಡ ಬಾಷಾ ಶಿಕ್ಷಕಿ ಕೆ.ಬಿ.ಉಷಾರಾಣಿ ದೈಹಿಕ ಶಿಕ್ಷಕ ಶಿವಪ್ರಸಾದ್, ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಶಿಕ್ಷಕಿ ಗೀತಾಮಾಲಿ ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಯೋಗ ತರಬೇತಿಗಳನ್ನು ನಡೆಸಿಕೊಟ್ಟರು. ಬಳಿಕ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭ ಯೋಗಾಸನದ ಬಂಗಿಗಳು ಹಾಗೂ ಯೋಗದ ಮಹತ್ವವನ್ನು ಸಾರುವ ಫಲಕವನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭ ಶಾಲೆಯ ಸಿವಿಲ್ ಕಾಮಗಾರಿ ಸಮಿತಿಯ ಅಧ್ಯಕ್ಷ ಕೆ. ಎ. ಹಾರಿಸ್, ಶಾಲೆಯ ಉಪಪ್ರಾಂಶುಪಾಲ ಎಂ.ಎಸ್. ಶಿವಣ್ಣ, ಎಸ್ ಡಿ ಎಂ ಸಿ ಸದಸ್ಯ ಸಿ. ಎಂ.ಮೊಯ್ದು,ಶಾಲೆಯ ಶಿಕ್ಷಕ ವೃಂದ, ಶಾಲೆಯ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.