ನಾಪೋಕ್ಲುವಿನ ಕೆಪಿಎಸ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Jun 4, 2025 - 16:48
 0  89
ನಾಪೋಕ್ಲುವಿನ ಕೆಪಿಎಸ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವರದಿ :ಝಕರಿಯ ನಾಪೋಕ್ಲು 

ನಾಪೋಕ್ಲು :ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 2025 -26ನೇ ಸಾಲಿನ ಶೈಕ್ಷಣಿಕ ವರ್ಷಾರಂಭಕ್ಕೆ ಶಾಲೆಯ ಶಿಕ್ಷಕವೃಂದ ಹಾಗೂ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಪುಸ್ತಕ ವಿತರಣೆ ಮಾಡಿ ಅದ್ಧೂರಿಯಾಗಿ ಶಾಲೆಗೆ ಬರಮಾಡಿಕೊಂಡರು.

ಶಾಲೆಯ ಪ್ರವೇಶ ದ್ವಾರದಲ್ಲಿ ಮಕ್ಕಳ ಬರುವಿಕೆಗಾಗಿ ಕಾದು ಕುಳಿತ ಶಾಲೆಯ ಶಿಕ್ಷಕವೃಂದ ಹಾಗೂ ಆಡಳಿತ ಮಂಡಳಿಯವರು ಹೂ,ಸಿಹಿ ಹಂಚಿ ಚಪ್ಪಾಳೆಯೊಂದಿಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು. ಶಾಲೆಯಲ್ಲಿ ನಡೆದ ನೂತನ ಶೈಕ್ಷಣಿಕ ವರ್ಷಾರಂಭ ಕಾರ್ಯಕ್ರಮದಲ್ಲಿ ಶಾಲಾ ಪ್ರವೇಶ ದ್ವಾರಾ ಮತ್ತು ಶಾಲಾ ಕೊಠಡಿಯನ್ನು ವಿದ್ಯಾರ್ಥಿಗಳು ಉದ್ಘಾಟಿಸಿದರು.ಬಳಿಕ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ನೀಡಲ್ಪಡುವ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲರಾದ ಎನ್.ಎಸ್. ಶಿವಣ್ಣ,ಪ್ರಭಾರ ಮುಖ್ಯ ಶಿಕ್ಷಕಿ ನಳಿನಿ, ಆಡಳಿತ ಮಂಡಳಿ ಉಪಾಧ್ಯಕ್ಷ ಎನ್. ಎಸ್. ಉದಯಶಂಕರ್,ಶಾಲೆಯ ಕಟ್ಟಡ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ ಎ ಹಾರಿಸ್, ಮಕ್ಕಳ ಸುರಕ್ಷತಾ ಸಮಿತಿ ಅಧ್ಯಕ್ಷ ಕೇಟೋಳಿರ ರಾಜ ಗಣಪತಿ,ಶಾಲೆಯ ಶಿಕ್ಷಕ ವೃಂದ, ಶಾಲೆಯ ಸಿಬ್ಬಂದಿ ವರ್ಗ ಹಾಗೂ ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0