ನಾಪೋಕ್ಲು:ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನಾಪೋಕ್ಲು:ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು:ನಾಪೋಕ್ಲವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿವಿಧ ಯೋಗಭ್ಯಾಸಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಯೋಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಶಿಕ್ಷಕರಾದ ಕಿರಣ್ ಅವರು ವಹಿಸಿ ಯೋಗ ದಿನದ ಮಹತ್ವದ ಕುರಿತು ಮಾತನಾಡಿದರು. ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಯೋಗಾಸನಗಳನ್ನು ನಡೆಸಿಕೊಟ್ಟರು. ಈ ಸಂದರ್ಭ ಶಾಲೆಯ ಶಿಕ್ಷಕಿಯರಾದ ಎ. ಟಿ.ದಿವ್ಯ ,ವಸಂತ ಲಕ್ಷ್ಮಿ ,ಎ. ಜಿ ಯಮುನಾ,ಬಿ. ಆರ್ ದಿವ್ಯ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.