ನಾಳೆ ಮಳೆ ಹಾನಿ ಪ್ರದೇಶಗಳಿಗೆ ಎ.ಎಸ್.ಪೊನ್ನಣ್ಣ ಭೇಟಿ
ಮಡಿಕೇರಿ:-ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜೂನ್, 01 ರಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ.
ಜೂನ್, 01 ರಂದು ಬೆಳಗ್ಗೆ 10.30 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಗ್ಗೆ 11.30 ಗಂಟೆಗೆ ಆರ್ಜಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಅನ್ವರುಲ್ ಉದಾ ಶಾಲೆಗೆ ಭೇಟಿ ನೀಡಲಿದ್ದಾರೆ.ಮಧ್ಯಾಹ್ನ 3 ಗಂಟೆಗೆ ಮೈತಾಡಿ ಗ್ರಾಮ ವ್ಯಾಪ್ತಿಯಲ್ಲಿ ಮನೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಸಿದ್ದಾಪುರ ರಸ್ತೆ ವೀಕ್ಷಿಸಲಿದ್ದಾರೆ. ಹಾಗೆಯೇ ಮಾಲ್ದಾರೆ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
