ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಮಡಿಕೇರಿ:ಮೂರ್ನಾಡು 66 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಆಗಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಬೇಕಿದ್ದು, ಜೂನ್, 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.
ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6 ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದ್ದು, ಜೂನ್, 10 ರಂದು ಬೆಳಗ್ಗೆ 10 ರಿಂದ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ರಾಮಚಂದ್ರ ಅವರು ಕೋರಿದ್ದಾರೆ.
