ನಾಳೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ
ಮಡಿಕೇರಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವು ಜೂನ್, 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ. ಸಿರಸಗಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಈರಸ್ವಾಮಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಎಂ.ರವಿಚಂದ್ರ, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್ ಇತರರು ಪಾಲ್ಗೊಳ್ಳಲಿದ್ದಾರೆ. ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ ಬಗ್ಗೆ ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅವರು ಉಪನ್ಯಾಸ ನೀಡಲಿದ್ದಾರೆ.