ನಾಳೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಾ.ಮಂತರ್ ಗೌಡ ಅವರಿಗೆ ಅಭಿನಂದನಾ ಕಾರ್ಯಕ್ರಮ

ಸೋಮವಾರಪೇಟೆ:ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಯಶಸ್ವಿ 2 ವರ್ಷಗಳನ್ನು ಪೂರೈಸಿ 3 ನೇ ವರ್ಷದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವ ಜನಪ್ರಿಯ ಶಾಸಕರಾದ ಡಾ.ಮಂತರ್ ಗೌಡ ರವರಿಗೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ ಬೆಳಗ್ಗೆ 10:30ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಸರ್ವ ಕಾರ್ಯಕರ್ತರು ಮತ್ತು ಮುಖಂಡರು ,ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಂಬಂಧಿಸಿದ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಯುವ ಕಾಂಗ್ರೆಸ್ ,ವಲಯ ಕಾಂಗ್ರೆಸ್ ಅಧ್ಯಕ್ಷರು/ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸರಕಾರಿ ನಾಮನಿರ್ದೇಷಿತ ಅಧ್ಯಕ್ಷರುಗಳು/ಸದಸ್ಯರುಗಳು, ಕಾಂಗ್ರೆಸ್ ಬೆಂಬಲಿತ ಪಂಚಾಯಿತಿಯ ಅಧ್ಯಕ್ಷರು/ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ತಪ್ಪದೇ ಭಾಗವಹಿಸಬೇಕಾಗಿ ಬಿ ಬಿ ಸತೀಶ್ ತಿಳಿಸಿದ್ದಾರೆ.