ನುಡಿದಂತೆ ನಡೆದ ಎ.ಎಸ್ ಪೊನ್ನಣ್ಣ : ಆರ್ಜಿ ಗ್ರಾಮ ಪಂಚಾಯಿತಿಯ ಪೆರುಂಬಾಡಿಯಲ್ಲಿ ಕಸ ವಿಲೇವಾರಿ ಘಟಕದ ಕಾಮಗಾರಿ ಆರಂಭ

ವಿರಾಜಪೇಟೆ: ವಿರಾಜಪೇಟೆ ತಾಲೂಕು, ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಹಿಂದೆ ಕಸವಿಲೇವಾರಿ ಸಮಸ್ಯೆ ಬಗ್ಗೆ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರಿಗೆ ದೂರು ಬಂದಿತ್ತು. ಗಂಭೀರವಾಗಿ ಪರಿಗಣಿಸಿದ್ದ ಶಾಸಕರು, ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸ್ತುತ ಇರುವ ಕಸವಿಲೇವಾರಿ ಘಟಕವನ್ನು ಅತ್ಯಾಧುನಿಕ ಹಾಗೂ ಪರಿಸರ ಸ್ನೇಹಿಯಾಗಿ ನವೀಕರಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.ಇದೀಗ ಶಾಸಕರು ಕೆಲವು ತಿಂಗಳ ಹಿಂದೆ ಭರವಸೆ ನೀಡಿದಂತೆ ಪೆರುಂಬಾಡಿ ಭಾಗದಲ್ಲಿ ಕಸವಿಲೇವಾರಿ ಘಟಕದ ಆಧುನೀಕರಣ ಕಾರ್ಯ ಪ್ರಗತಿಯಲ್ಲಿದ್ದು, ಅತಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.