ಪಹಲ್ಗಾಮ್ ಭಯೋತ್ಪಾದಕ ದಾಳಿ: ಯುವ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಹಚ್ಚಿ ಮೌನ ಪ್ರತಿಭಟನೆ

ಪಹಲ್ಗಾಮ್ ಭಯೋತ್ಪಾದಕ ದಾಳಿ:  ಯುವ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಹಚ್ಚಿ ಮೌನ ಪ್ರತಿಭಟನೆ

ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಗುಂಪನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ನಾವೆಲ್ಲರೂ ತೀವ್ರ ದುಃಖಿತರಾಗಿದ್ದೇವೆ. ಮತ್ತು ಆಘಾತಕ್ಕೊಳಗಾಗಿದ್ದೇವೆ.ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡಾ ಸೋಮಣ್ಣ ರವರ ನೇತೃತ್ವದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮೇಣದ ಬತ್ತಿ ಯನ್ನು ಹಚ್ಚಿ ದುರಂತದಲ್ಲಿ ಮಡಿದ ಪ್ರವಾಸಿಗರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನ ಪ್ರತಿಭಟನೆಯನ್ನು ನಡೆಸಿದರು.

ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಕೀಂ ಸುಂಟಿಕೊಪ್ಪ,ಮಡಿಕೇರಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್ ,ವಿರಾಜಪೇಟೆ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ಚಂಗಪ್ಪ,ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೊಳಿ,ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ ,ಮಡಿಕೇರಿ ನಗರಸಭಾ ಸದಸ್ಯ ಯಾಕೂಬ್ ,ಮುಖಂಡರಾದ ರೌಫ್, ಚಂದ್ರಶೇಖರ್ ,ಸಿರಾಜ್ ಪರವಂಡ , ಹಂಸಕೋಡಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.