ಪೊನ್ನಂಪೇಟೆ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

ಪೊನ್ನಂಪೇಟೆ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪೊನ್ನಂಪೇಟೆ:ಅನಾರೋಗ್ಯದಿಂದ ಬಳಲುತ್ತಿದ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ವ್ಯಾಪ್ತಿಯ ಹಳ್ಳಿಗಟ್ಟು ಗ್ರಾಮದ ಪ್ರಕೃತಿ ನಗರದಲ್ಲಿ ಇಂದು ಮುಂಜಾನೆ 2.30 ರಲ್ಲಿ ನಡೆದಿದೆ.ಮೂಲತ ತೂಚಮಕೇರಿ ಗ್ರಾಮದ ಪೆಮ್ಮಂಡ ಕಾಶಿ 78 (ವರ್ಷ) ಎಂಬುವವರು ಇಂದು ಬೆಳಗ್ಗಿನ ಜಾವ 2.30 ರಲ್ಲಿ ಡೆತ್ ನೋಟ್ ಬರೆದು ತಮ್ಮ ಮನೆಯ ಮುಂಭಾಗದಲ್ಲಿರುವ ಗೋಡೌನ್ನ ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ ಕಾರಣ ಎರಡು ವರ್ಷದ ಹಿಂದೆಯೇ ಆತ್ಮಹತ್ಯೆ ಮಾಡಲು ತೆರೆದ ಬಾವಿಗೆ ಹಾರಿ ಪ್ರಯತ್ನ ಪಟ್ಟಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ನವೀನ್ ಕುಮಾರ್, ಹೆಡ್ ಕಾನ್ಸ್ಟೇಬಲ್ ಶೋಭಾ, ಮಹಮ್ಮದ್ ಅಲೀ, ಸಂತೋಷ್ ದೊಡ್ಡಮನಿ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತ ದೇಹವನ್ನು ರವಾನಿಸಲಾಗಿದೆ.

ವರದಿ:ಚೆಪ್ಪುಡಿರ ರೋಷನ್