ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ:ಇಬ್ಬರು ಪತ್ರಕರ್ತರಿಗೆ ಪ್ರಶಸ್ತಿ

ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ:ಇಬ್ಬರು ಪತ್ರಕರ್ತರಿಗೆ ಪ್ರಶಸ್ತಿ

ಗೋಣಿಕೊಪ್ಪ ; ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಇಬ್ಬರು ಪತ್ರಕರ್ತರು ಭಾಜನರಾಗಿದ್ದಾರೆ.

   ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿಯರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಅಣ್ಣೀರ ಹರೀಶ್ ಮಾದಪ್ಪ ಅವರ ಮೂರು ಚೆಕ್ ಡ್ಯಾಂ ವೈಪಲ್ಯ ವರದಿ ಪಡೆದುಕೊಂಡಿದೆ.

  ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದ ಎಸ್. ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಜಿಪಿಎಲ್ ಟೂರ್ನಿ ಆರಂಭಕ್ಕೆ ಸಜ್ಜು ವರದಿಗೆ ಜಗದೀಶ್ ಜೋಡುಬೀಟಿ, ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಂದೆ ಸಣ್ಣುವಂಡ ಮಾದಪ್ಪ, ತಾಯಿ ಜಾನಕಿ ಮಾದಪ್ಪ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಜಗದೀಶ್ ಜೋಡುಬೀಟಿ ಅವರ ಪ್ಲಾಸ್ಟಿಕ್ ಹೊದಿಕೆಯೇ ಪರಿಸರಕ್ಕೆ ಮಾರಕ ವರದಿ ಭಾಜನವಾಗಿದೆ.

 ಜೂನ್ 24 ರಂದು ನಡೆಯುವ ಮಹಾ ಸಭೆ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಎನ್. ದಿನೇಶ್ ತಿಳಿಸಿದ್ದಾರೆ.