ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಲಯ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಸಭೆ: ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳಿಸುವಂತೆ ಎ.ಎಸ್ ಪೊನ್ನಣ್ಣ ಕರೆ

ಗೋಣಿಕೊಪ್ಪಲು: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಗೆ ಸಂಬಂಧಪಟ್ಟ ಎಲ್ಲಾ ವಲಯ ಕಾಂಗ್ರೆಸ್ ಅಧ್ಯಕ್ಷರುಗಳೊಂದಿಗೆನ ಸಭೆಯಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಭಾಗವಹಿಸಿದರು.
ಪಕ್ಷದ ಕಾರ್ಯ ಚಟುವಟಿಕೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಇಲ್ಲಿ ಚರ್ಚಿಸಲಾಯಿತು. ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ತಮ್ಮ ಹಲವು ಅಭಿಪ್ರಾಯಗಳನ್ನು ಶಾಸಕರ ಎದುರು ಪ್ರಸ್ತಾವಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಪಕ್ಷ ಸಂಘಟನೆಯ ದೃಷ್ಟಿಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಪರಸ್ಪರ ಚರ್ಚಿಸುವುದರೊಂದಿಗೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಮ್ಮತದ ನಿರ್ಧಾರ ಕೈಗೊಂಡು ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳಿಸುವಂತೆ ಕರೆ ನೀಡಿದರು. ಅದೇ ರೀತಿ ಸರಕಾರ ಕೈಗೊಳ್ಳುತ್ತಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಹಾಗೂ ಪ್ರಮುಖರು ಮತ್ತಷ್ಟು ಚುರುಕಾಗಿ ಕೆಲಸ ಮಾಡಬೇಕೆಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.
ಸಭೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಗೋಣಿಕೊಪ್ಪ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ,ಮುಖಂಡರಾದ ಎಜೆ ಬಾಬು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಮ್ಮಡ ಸೋಮಣ್ಣ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ , ಪಕ್ಷದ ಪ್ರಮುಖರು ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.