ಪೊನ್ನಂಪೇಟೆ:ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ

ಪೊನ್ನಂಪೇಟೆ:ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ
ನೆಮ್ಮಲೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಂಚಾಯಿತಿ ವತಿಯಿಂದ ಉಚಿತ ಕೊಡೆಗಳನ್ನು ವಿತರಿಸಲಾಯಿತು . ಈ ಸಂದರ್ಭ ಪಂಚಾಯಿತಿ ಸದಸ್ಯರಾದ ಚೊಟ್ಟೆಯಂಡಮಾಡ ವಿಶು ರಂಜಿ, ಕುಂಜ್ಞಂಗಡ ಕೃಷ್ಣ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಾರಾ, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.