ಪೊನ್ನಂಪೇಟೆ:ಹುದಿಕೇರಿ ಗ್ರಾಮದ ನೂತನ ಬಸ್ಸು ತಂಗುದಾಣ ಕಾಮಗಾರಿ ಪರಿಶೀಲನೆ ನಡೆಸಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ:ಹುದಿಕೇರಿ ಗ್ರಾಮಕ್ಕೆ ಈ ಹಿಂದೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಭೇಟಿ ನೀಡಿದ ಸಂದರ್ಭದಲ್ಲಿ ಈ ಭಾಗದಲ್ಲಿ ಒಂದು ಬಸ್ ತಂಗುದಾಣ ನಿರ್ಮಿಸಿ ಕೊಡಬೇಕೆಂದು ಸಾರ್ವಜನಿಕರು ಅವರಲ್ಲಿ ಬೇಡಿಕೆ ಇಟ್ಟಿದ್ದರು. ಅದರಂತೆ ಶಾಸಕರು ತಮ್ಮ ಅನುದಾನದಲ್ಲಿ ಆಧುನಿಕ ಶೈಲಿಯ ಬಸ್ ತಂಗುದಾಣ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಸದ್ರಿ ಪ್ರಗತಿಯಲ್ಲಿರುವ ಈ ಕಾಮಗಾರಿಯನ್ನು ಪೊನ್ನಂಪೇಟೆ ಪ್ರವಾಸದ ಸಂದರ್ಭದಲ್ಲಿ ಮಾನ್ಯ ಶಾಸಕರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್ ಉಪಸ್ಥಿತರಿದ್ದರು.